ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಭರವಸೆ
ದಾವಣಗೆರೆ, ಅ. 30 – ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಕ್ರಿಯಾಶೀಲ ಹಾಗೂ ಹಿರಿಯರಾದ ಬಿ. ವಾಮದೇವಪ್ಪನವರ ಅಧ್ಯಕ್ಷತೆಯಲ್ಲಿ ನಿರಂತರ ವಾಗಿ ಕನ್ನಡ ನಾಡು, ನುಡಿಯನ್ನು ಪ್ರತಿಬಿಂಬಿ ಸುವಂತಹ ವಿಶಿಷ್ಟ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಶ್ಲ್ಯಾಘಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಕನ್ನಡ ಭವನಕ್ಕೆ ನಿನ್ನೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಸರ್ವ ರೀತಿಯಲ್ಲೂ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವ ಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಬಸ ವಂತಪ್ಪ ಅವರು, ಬಿ ವಾಮದೇವಪ್ಪನವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಭಿನ್ನ ಕಾರ್ಯಕ್ರಮಗಳ ಮೂಲಕ ಜಿಲ್ಲೆ ಯಾದ್ಯಂತ ಕನ್ನಡದ ಕಂಪನ್ನು ಪಸರಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶಾಸಕರನ್ನು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅವರು ಕನ್ನಡದ ಪೇಟ ಹಾಗೂ ಶಾಲನ್ನು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಜಿ. ಜಗದೀಶ್ ಕೂಲಂಬಿ, ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ ಉಪಸ್ಥಿತರಿದ್ದರು.