ಹಡಗಲಿ, ಅ.30- ತಾಲ್ಲೂಕಿನ ಕುರುವತ್ತಿ ಗ್ರಾಮ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಅನಧಿಕೃತ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಹೊಸಪೇಟೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಸಿ.ಕೆ.ವೆಂಕಟೇಶ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಮರಳು ಸಾಗಿಸುವ ತೆಪ್ಪಗಳನ್ನು ವಶಪಡಿಸಿಕೊಂಡಿದ್ದಾರೆ. ಹಿರೇಹಡಗಲಿ ಪೊಲೀಸ್ ಠಾಣೆ ಪಿಎಸ್ಐ ಮಾರುತಿ ಮತ್ತು ಹಡಗಲಿ ತಹಶೀಲ್ದಾರ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
January 15, 2025