ದಾವಣಗೆರೆ, ನ. 5 – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗು ಸ್ಮಾರ್ಟ್ ಸಿಟಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಗಾಜಿನ ಮನೆಯಲ್ಲಿ ನಿನ್ನೆ ನಡೆದ `ಸುವರ್ಣ ಕರ್ನಾಟಕ ರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಚಿರಂತನ ಸಾಂಸ್ಕೃತಿಕ ಸಂಸ್ಥೆಯ ಕಲಾವಿದರು ಮಹಿಷಾಸುರ ಮರ್ದಿನಿ ಹಾಗು ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ತೋಟ ಗಾರಿಕೆ ಡಿ.ಡಿ ರಾಘವೇಂದ್ರ, ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖೆಯ ಮಲ್ಲಿಕಾರ್ಜುನ ಮಠದ್ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮತ್ತು ಇತರರು ಉಪಸ್ಥಿತರಿದ್ದರು.