ಅಂತರ್ ಕಾಲೇಜು ಚೆಸ್ ಪಂದ್ಯಾವಳಿಗೆ ಚಾಲನೆ

ಅಂತರ್ ಕಾಲೇಜು ಚೆಸ್ ಪಂದ್ಯಾವಳಿಗೆ ಚಾಲನೆ

ದಾವಣಗೆರೆ, ನ.7- ಬಾಪೂಜಿ ಅಕಾಡೆಮಿ ಆಫ್ ಮ್ಯಾನೇಜ್ಮೆಂಟ್ ಅಂಡ್ ರಿಸರ್ಚ್ ವತಿಯಿಂದ ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾನಿ ಲಯದ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಗೆ ಸೋಮವಾರ ಚಾಲನೆ ನೀಡಲಾಯಿತು. ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ ಪ್ರಾಂಶುಪಾಲ ಡಾ.ಬಿ. ವೀರಪ್ಪ ಪಂದ್ಯಾವಳಿಗೆ ಚಾಲನೆ ನೀಡಿದರು. ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಕ ಡಾ.ವೀರೇಂದ್ರ, ದಾವಣಗೆರೆ ವಿವಿ ಕ್ರೀಡಾಧಿಕಾರಿ ಬಿ.ವೀರಪ್ಪ, ಡಾ. ಸ್ವಾಮಿ ತ್ರಿಭುವನಾನಂದ ಹಾಗು ಇತರರು ಈ ಸಂದರ್ಭದಲ್ಲಿದ್ದರು.

error: Content is protected !!