ಹರಪನಹಳ್ಳಿ: 30 ರಂದು ಕನಕದಾಸರ ಜಯಂತಿ

ಹರಪನಹಳ್ಳಿ: 30 ರಂದು ಕನಕದಾಸರ ಜಯಂತಿ

ಹರಪನಹಳ್ಳಿ, ನ.19- ದಾಸ ಶ್ರೇಷ್ಠ ಭಕ್ತ ಕನಕದಾಸರ 536ನೇ ಜಯಂತಿಯನ್ನು ನ.30 ರಂದು ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ತಾಲ್ಲೂಕು ಆಡಳಿತದಿಂದ ಆಚರಿಸಲಾಗುವುದು ಎಂದು ತಹಶೀಲ್ದಾರ್ ಗಿರೀಶ್‌ ಬಾಬು ತಿಳಿಸಿದರು.

ಪಟ್ಟಣದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಹರಿಹರ ಸರ್ಕಲ್ ವೃತ್ತದಿಂದ ತಾಲ್ಲೂಕು ಪಂಚಾಯ್ತಿವರೆಗೂ ಕನಕದಾಸರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳಿಂದ ಮೆರವಣಿಗೆ ನಡೆಯಲಿದೆ ಬಳಿಕ ಸಾಮಾರ್ಥ್ಯ ಸೌಧದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.

ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ತಲಾ ಮೂರು ವಿದ್ಯಾರ್ಥಿಗಳನ್ನು ತಾಲ್ಲೂಕು ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಗುವುದು ಮತ್ತು ಕನಕದಾಸರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ, ವಕೀಲ ಗೋಣಿಬಸಪ್ಪ, ವಿವಿಧ ಇಲಾಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!