ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಹರಿಹರ, ನ. 19- ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್  ಅವರು ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಇಂದು ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಪುಸ್ತಕ, ಔಷಧ ಉಗ್ರಾಣ, ಆಸ್ಪತ್ರೆಯ ಸ್ವಚ್ಛತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಷಣ್ಮುಖಪ್ಪ, ಡಾ. ಶಶಿಕಲಾ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಅಂಬಿಕಾ, ತಿಪ್ಪೇಸ್ವಾಮಿ, ಪ್ರತಿಭಾ, ಪೊಲೀಸ್ ನವೀನ್ ಬೆಳ್ಳೂಡಿ ಇತರರು ಹಾಜರಿದ್ದರು.

error: Content is protected !!