ದಾವಣಗೆರೆ, ನ.21- ದಾವಣಗೆರೆ ಇಲೆವೆನ್ಸ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ವತಿಯಿಂದ ಶಾಸಕ ಶಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ಶ್ರೀಮತಿ ಪಾರ್ವತಮ್ಮ ಅವರ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಇಂದು ಹಂದರಗಂಬ ಪೂಜೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಂಘದ ದಿನೇಶ್ ಕೆ.ಶೆಟ್ಟಿ, ಶಿವಗಂಗಾ ಶ್ರೀನಿವಾಸ್, ರಾಜು ರೆಡ್ಡಿ, ಎ.ನಾಗರಾಜ್, ಮಾಲತೇಶ್ ಎಂ.ಆರ್., ರಂಗನಾಥ್, ಕುರುಡಿ ಗಿರೀಶ್, ಜಯಪ್ರಕಾಶ್ ಗೌಡ, ಚಾಮುಂಡಿ ಶಿವಕುಮಾರ್, ರಂಗಸ್ವಾಮಿ, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.