ದಾವಣಗೆರೆ, ನ. 22- ನಗರದ ಸೇಂಟ್ ಜಾನ್ಸ್ ವಿದ್ಯಾಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಪುರುಷರ ದಿನ ಆಚರಿಸಲಾಯಿತು.
ಎಲ್ಲಾ ಶಿಕ್ಷಕಿಯರು ಸೇರಿ ವಿದ್ಯಾಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪುರುಷರಿಗೆ ವಿವಿಧ ಸ್ಪರ್ಧೆ ನಡೆಸುವ ಮೂಲಕ ರಂಜಿಸಿದರು. ಕಾರ್ಯಕ್ರಮ ದಲ್ಲಿ ಸಂಸ್ಥೆಯ ಅಧ್ಯಕ್ಷ ಹೆಚ್. ಅನಿಲ್ ಕುಮಾರ್, ಕಾರ್ಯದರ್ಶಿ ಟಿ.ಎಂ.ಉಮಾಪತಯ್ಯ ಹಾಗೂ ಖಜಾಂಚಿ ಪ್ರವೀಣ್ ಹುಲ್ಲುಮನೆ, ಪ್ರಾಂಶುಪಾಲರಾದ ಸೈಯ್ಯದ್ ಆರಿಫ್ ಆರ್. ಹಾಗೂ ಶ್ರೀಮತಿ ಪ್ರೀತಾ.ಟಿ. ಉಪಪ್ರಾಂಶುಪಾಲರಾದ ಶ್ರೀಮತಿ ನೇತ್ರಾವತಿ ಉಪಸ್ಥಿತರಿದ್ದರು.