ಹರಿಹರ,ನ,24- `ಆಮ್ ಆದ್ಮಿ’ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ದೃಷ್ಟಿಯಿಂದ ತಾಲ್ಲೂಕು ಮಟ್ಟದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿದ್ದು, ತಾಲ್ಲೂಕು ಅಧ್ಯಕ್ಷರಾಗಿ ಜಿ.ಹೆಚ್. ಬಸವರಾಜ್ ಹಲಸಬಾಳು, ನಗರ ಘಟಕದ ಅಧ್ಯಕ್ಷರಾಗಿ ಬಿ. ಮಲ್ಲೇಶ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಸ್. ಶಿವಕುಮಾರ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಉಪಾಧ್ಯಕ್ಷರಾಗಿ ಎಸ್.ಪಿ. ರೋಹಿತ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯಾಗಿ ಮಹಮ್ಮದ್ ಯೂಸುಫ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇನಹಳ್ಳಿ ವೀರಭದ್ರಪ್ಪ, ಎಸ್ಸಿ, ಎಸ್ಟಿ, ಘಟಕದ ಅಧ್ಯಕ್ಷರಾಗಿ ಚಂದ್ರಪ್ಪ ದೇವರಬಳಕೇರೆ, ಕಾರ್ಯದರ್ಶಿಯಾಗಿ ಎ.ಕೆ. ಮಂಜಣ್ಣ ವಾಸನ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೈಯದ್ ಸಾದತ್, ಕಾರ್ಯದರ್ಶಿಯಾಗಿ ಮಹಮ್ಮದ್ ಭಾಷಾ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಇರ್ಫಾನ್, ದಾದಾಪೀರ್, ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜೀಶಾನ್ ಮಲ್ಲಿಕ್, ಮಹಿಳಾ ಘಟಕದ ಅಧ್ಯಕ್ಷರಾಗಿ ರೇಖಮ್ಮ, ಉಪಾಧ್ಯಕ್ಷರಾಗಿ ಗಂಗಮ್ಮ, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತಾ ಮತ್ತಿತರನ್ನು ಘಟಕಕ್ಕೆ ನೂತನ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಆಮ್ ಆದ್ಮಿ ಪಕ್ಷದ ನೂತನ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಸ್. ಬಸವರಾಜ್ ಹಲಸಬಾಳು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಣೇಶ ಕೆ. ದುರ್ಗದ್ ಮಾತನಾಡಿದರು.
ಈ ಸಂದರ್ಭದಲ್ಲಿ ಆಮ್ಮ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ತಾಲ್ಲೂಕು ಕಾರ್ಯದರ್ಶಿ ಮಹಮ್ಮದ್ ಯೂಸೂಫ್, ನಗರ ಘಟಕದ ಅಧ್ಯಕ್ಷ ಬಿ. ಮಲ್ಲೇಶ್, ತಾಲ್ಲೂಕು ಉಪಾಧ್ಯಕ್ಷ ಎಸ್.ಪಿ. ರೋಹಿತ್, ದಾವಣಗೆರೆ ಉತ್ತರ ಭಾಗದ ಅಧ್ಯಕ್ಷ ದೇವರಾಜ್ ಇತರರು ಹಾಜರಿದ್ದರು.