ದಾವಣಗೆರೆ, ಡಿ. 1- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದಾವಣಗೆರೆ ಗ್ರಾಮಾಂತರ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಬೇತೂರು ರೋಡ್ ವಲಯ ಇವರ ಸಹಯೋಗದಲ್ಲಿ ಬೇತೂರು ರಸ್ತೆಯ ಶ್ರೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಒಕ್ಕೂಟದ ಅಧ್ಯಕ್ಷರಾದ ನಾಗರತ್ನಮ್ಮ ಆನೆಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಮೂಹಿಕ ಶ್ರೀ ಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ದೀಪವನ್ನು ಜಿಲ್ಲಾ ನಿರ್ದೇಶಕ ಎಂ. ಲಕ್ಷ್ಮಣ್ ಬೆಳಗಿಸಿದರು.
ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಎಂ.ಬಿ. ನಾಗರಾಜ್ ಕಾಕನೂರು ಉಪನ್ಯಾಸ ನೀಡಿ, ಗ್ರಾಮ ಸುಭಿಕ್ಷೆಗಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹಾಗೂ ಮಹಿಳೆಯರು ಸಂಸ್ಕಾರ ಮತ್ತು ಸಂಸ್ಕೃತಿಯಿಂದ ಮಕ್ಕಳನ್ನು ಬೆಳೆಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಶ್ರೀಮತಿ ಶಿವಲೀಲಾ ಕೊಟ್ರೇಶಯ್ಯ, ಜಿಲ್ಲಾ ಅಲ್ಪ ಸಂಖ್ಯಾತರ ಉಪಾಧ್ಯಕ್ಷರಾದ ಸೈಯದ್ ಆರೀಫ್, ತಾಲ್ಲೂಕು ಕಸಾಪ ನಿರ್ದೇಶಕ ಎಂ. ಷಡಕ್ಷರಪ್ಪ ಬೇತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೇತೂರು ರೋಡ್ ವಲಯದ ಯೋಜನಾಧಿಕಾರಿ ಶ್ರೀಮತಿ ಯಶೋಧ ಸ್ವಾಗತಿಸಿದರು. ಶ್ರೀಮತಿ ಜಯಶ್ರೀ ಪ್ರಾರ್ಥಿಸಿದರು. ಮೇಲ್ವಿಚಾರಕ ಕೃಷ್ಣ ನಿರೂಪಿಸಿದರು. ಶ್ರೀಮತಿ ದ್ಯಾಮಕ್ಕ ಮಂಜುನಾಥ ವಂದಿಸಿದರು.