ಲಾನ್ ಟೆನ್ನಿಸ್: ರಾಷ್ಟ್ರಮಟ್ಟಕ್ಕೆ ಈಶ್ವರಮ್ಮ ಶಾಲಾ ವಿದ್ಯಾರ್ಥಿಗಳು ಆಯ್ಕೆ

ಲಾನ್ ಟೆನ್ನಿಸ್: ರಾಷ್ಟ್ರಮಟ್ಟಕ್ಕೆ ಈಶ್ವರಮ್ಮ ಶಾಲಾ ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ, ಡಿ. 3 – ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಕ್ರೀಡಾಕೂಟದಲ್ಲಿ ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷದೊಳಗಿನ ಲಾನ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಎ.ಎಂ.ಯಶಸ್, ಎಚ್.ತರುಣ್ ಪ್ರಥಮ ಸ್ಥಾನ ಪಡೆದು ಆಯ್ಕೆಯಾಗಿದ್ದರೆ, 17 ವರ್ಷದೊಳಗಿನ ಲಾನ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಎಂ.ಶ್ರೇಯಂತ್, ಎಚ್.ಪ್ರೀತಮ್ ಪ್ರಥಮ ಸ್ಥಾನ ಪಡೆದು 17 ವರ್ಷದೊಳಗಿನ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಇವರಿಗೆ ಈಶ್ವರಮ್ಮ ಶಾಲಾ ದೈಹಿಕ ಶಿಕ್ಷಕರಾದ ಕೆ.ರವಿ, ನಾಗರಾಜ್ ಉತ್ತಂಗಿ, ಎಂ.ಪ್ರಸನ್ನ ಮಾರ್ಗದರ್ಶನ ನೀಡಿದ್ದರು. 

ಮಕ್ಕಳಿಗೆ ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಸುಜಾತ ಕೃಷ್ಣ, ಕಾರ್ಯದರ್ಶಿ ಎ.ಆರ್.ಉಷಾ ರಂಗನಾಥ್, ಈಶ್ವರಮ್ಮ ಟ್ರಸ್ಟ್‍ನ ಕಾರ್ಯದರ್ಶಿ ಜಿ.ಆರ್.ವಿಜಯಾನಂದ, ಶಾಲೆಯ ಖಜಾಂಚಿಗಳಾದ ಸುಜಾತ ವಿಜಯಾನಂದ ಹಾಗೂ ಶಾಲಾ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪ ಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

error: Content is protected !!