ದಾವಣಗೆರೆ, ಡಿ.4- ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಗರದ ರಾಘವೇಂದ್ರ ಹೈಟೆಕ್ ಪಿಯು ಕಾಲೇಜು ವಿದ್ಯಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಾನಸ ಜಿ. ಎಚ್. ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಮಂಜುಳಾ ಎನ್. ಎಚ್. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶಶಾಂಕ್ ಕೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಅಮೂಲ್ಯ ಲಕ್ಷ್ಮಿ ಭಾವಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಹಾಗೂ ಸಾನಿಯಾ ಡಿ. ಎಸ್ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು, ಚಿತ್ರದುರ್ಗದಲ್ಲಿ ನಡೆಯುವ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಪ್ರಾಚಾರ್ಯ ಡಾ. ಅನಿಲ್ಕುಮಾರ್ ಶ್ಯಾಗಲೆ, ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯದರ್ಶಿ ಹರೀಶ್ ಎಂ.ಆರ್, ಸಂಚಾಲಕರಾದ ಮೋಹನ್ ಎಚ್, ದಿವ್ಯಾ ಕೆ. ಜಿ. ವಿದ್ಯಾರ್ಥಿ ಗಳನ್ನು ಅಭಿನಂದಿಸಿದ್ದಾರೆ.