ದಾವಣಗೆರೆ, ಡಿ.6- ಮೈಸೂರಿನಲ್ಲಿ ಅಭಿರುಚಿ ಬಳಗದ ವತಿಯಿಂದ ಮೊನ್ನೆ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹರಿಹರದ ಚಿಂತನ ಪ್ರತಿಷ್ಠಾನದ ಅಧ್ಯಕ್ಷ ಸುಬ್ರಹ್ಮಣ್ಯ ನಾಡಿಗೇರ್ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ದಾವಣಗೆರೆ ಜಿಲ್ಲಾಧ್ಯಕ್ಷ ಡಾ.ಫ್ರಾನ್ಸಿಸ್ ಅವರಿಗೆ ರಾಜ್ಯ ಮಟ್ಟದ ಅಭಿರುಚಿ ಮಾಧ್ಯಮ ರತ್ನ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಯಿತು.
ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮೇಲುಕೋಟೆ ವೆಂಗಿಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ ವಹಿಸಿದ್ದರು. ಅಭಿರುಚಿ ಸಂಸ್ಥೆಯ ಸಂಸ್ಥಾಪಕ ಎನ್.ವಿ.ರಮೇಶ್, ಅಭಿರುಚಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಉಮಾ ರಮೇಶ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಶ್ರೀಮತಿ ಸುಮತಿ ಸುಬ್ರಹ್ಮಣ್ಯ ವಹಿಸಿದ್ದರು.