ಜಗಳೂರು, ಡಿ. 12- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ಸಹಾಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ವಿಕಾಸ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸ್ವಯ ಸೇವಾ ಸಂಸ್ಥೆ ಅಧ್ಯಕ್ಷರಾದ ಕೆ. ಮಹಾಲಕ್ಷ್ಮಿ ತಿಳಿಸಿದರು.
ಅವರು ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ವಿಕಾಸ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ದಾವಣಗೆರೆ ಇವರ ಸಹಯೋಗದಲ್ಲಿ ನಡೆದ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣೆ ಸಂದರ್ಭದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರಾದ ಬಿ.ಟಿ. ಭಾಗ್ಯಮ್ಮ ಇತರರು ಉಪಸ್ಥಿತರಿದ್ದರು.