ದಾವಣಗೆರೆ, ಡಿ.13- ಜಾರ್ಖಂಡ್ ರಾಜ್ಯ ಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಕೋಟಿಗಟ್ಟಲೇ ಹಣ ಪತ್ತೆ ಪ್ರಕರಣವನ್ನು ಖಂಡಿಸಿ, ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರೈಲು ನಿಲ್ದಾಣದ ಮುಂಭಾಗ ತೆರಳಿ ಪ್ರತಿಭಟನೆ ನಡೆಸಿತು.
ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಎಂಬುದಕ್ಕೆ ಸಾಹು ಅವರ ಮನೆಯಲ್ಲಿ ಸಿಕ್ಕ ಕೋಟಿಗಟ್ಟಲೆ ಹಣವೇ ಸಾಕ್ಷಿ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲಿದೆ. ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಕೊಳೇನಹಳ್ಳಿ ಸತೀಶ್, ಲೋಕಿಕೆರೆ ನಾಗರಾಜ್, ಹನುಮನಾಯ್ಕ, ಎನ್. ಹೆಚ್. ಹಾಲೇಶ್, ಕಲ್ಲೇಶ್, ಟಿಂಕರ್ ಮಂಜಣ್ಣ, ವಿಶ್ವಾಸ್ ಇತರರು ಇದ್ದರು.