ಹರಿಹರ, ಡಿ.14- ಹರಿಹರದಲ್ಲಿ ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹರಿಹರ ತಾಲ್ಲೂಕು ಘಟಕ ಮತ್ತು ಅಕ್ಷಯ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ `ಜನತಾವಾಣಿ’ ಹಿರಿಯ ವರದಿಗಾರರೂ ಆಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಜಿಗಳಿ ಪ್ರಕಾಶ್ ಮತ್ತು `ಜನತಾವಾಣಿ’ ವರದಿಗಾರರೂ ಆಗಿರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಂ. ಚಿದಾನಂದ ಕಂಚಿಕೇರಿ ಅವರುಗಳಿಗೆ `ಡಾ. ಬಿ.ಆರ್.ಅಂಬೇಡ್ಕರ್ ಸದ್ಭಾವನಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಆದಿ ಜಾಂಬವ ಗುರುಪೀಠದ ಜಗದ್ಗುರು ಶ್ರೀ ಷಡಾಕ್ಷರ ಮುನಿ ಸ್ವಾಮೀಜಿ, ಶಾಸಕ ಬಿ. ಪಿ.ಹರೀಶ್, ಮಾಜಿ ಶಾಸಕ ಎಸ್.ರಾಮಪ್ಪ, ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್, ತಾ. ಸಂಚಾಲಕ ಪಿ.ಜೆ.ಮಹಾಂತೇಶ್, ಅಕ್ಷಯ ಆಸ್ಪತ್ರೆಯ ಡಾ. ವಿ.ಟಿ.ನಾಗರಾಜ್ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು.
January 4, 2025