ಶ್ರೀಶೈಲ, ಕಾಶಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ

ಶ್ರೀಶೈಲ, ಕಾಶಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ

ಹಾವೇರಿ, ಡಿ. 25 – ಶಿಗ್ಗಾವಿ ತಾಲ್ಲೂಕು ಬಿಸನಳ್ಳಿ ಗ್ರಾಮದ ಶ್ರೀ ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಸಂಗೀತ ಮತ್ತು ಜ್ಯೋತಿಷ್ಯ ಪಾಠಶಾಲೆಯ ದಶಮಾನೋತ್ಸವದ 5ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಮದ್ ಶ್ರೀಶೈಲ ಜಗದ್ಗುರು ಹಾಗೂ ಕಾಶಿ ಪೀಠದ ಕಿರಿಯ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ನಿನ್ನೆ ಜರುಗಿತು.

ದಾವಣಗೆರೆಯಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಶ್ರೀ ಕಾಶಿ ಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಯಂದ್ರ ಅವರನ್ನು ಜಗದ್ಗುರುಗಳು ಆಶೀರ್ವಾದಿಸಿದರು.

error: Content is protected !!