ಜಿಲ್ಲಾ ಕಾಂಗ್ರೆಸ್ನಿಂದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ
ದಾವಣಗೆರೆ, ಡಿ.28- ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ ಭವ್ಯ ಇತಿಹಾಸದ 138 ವರ್ಷಗಳನ್ನು ಡಿಸೆಂಬರ್ 28ಕ್ಕೆ ಪೂರ್ಣಗೊಳಿಸಿ, 139ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿ ಎಸ್ಸೆಸ್ – ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದ್ದು, ಇಂದು ಈ ಸಂಭ್ರಮವನ್ನು ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಆಚರಿಸುವುದಲ್ಲ, ಇಡೀ ದೇಶದ ಜನರು ಮಾಡಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಮಾಜಿ ಸಚಿವ ಶಿವಮೂರ್ತಿ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಡೋಲಿ ಚಂದ್ರು, ಕೊಡಪಾನ ದಾದಾಪೀರ್, ಅಲಿ ರೆಹಮತ್, ಅಬ್ದುಲ್ ಜಬ್ಬಾರ್, ಹರೀಶ್, ಲಿಯಾಖತ್, ಜರೀಕಟ್ಟೆ ಉಮಾದೇವಿ, ಕವಿತಾ ಚಂದ್ರಶೇಖರ್ ಮತ್ತಿತರರಿದ್ದರು.