ರಸ್ತೆ ಕಾಮಗಾರಿಗೆ ಭೂಮಿ ಪೂಜೆ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ

ರಸ್ತೆ ಕಾಮಗಾರಿಗೆ ಭೂಮಿ ಪೂಜೆ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ

ದಾವಣಗೆರೆ, ಜ. 13 – ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಬದ್ದವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ನಗರದ ಬಿ.ಎನ್.ಲೇಔಟ್‍ನಲ್ಲಿನ ಮೌಲಾನಾ ಆಜಾದ್ ಭವನದಿಂದ ಬೂದಾಳ್ ರಸ್ತೆಯವರಗಿನ ಸಿ.ಸಿ.ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಹಿಂದೆಯೂ ಸಹ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ದಿನೇ ದಿನೇ ಹೊಸ ಲೇ ಔಟ್‍ಗಳ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾಗಿದ್ದು, ವಿವಿಧ ಇಲಾಖೆಗಳ ಅನುದಾನದಡಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದರು.

ಮಹಾಪೌರ ವಿನಾಯಕ ಪೈಲ್ವಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್, ಸದಸ್ಯ ಜಿ.ಡಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಕಾಂಗ್ರೆಸ್ ಅಧ್ಯಕ್ಷ ಅಯೂಬ್, ಪಂಚಾಯತ್ ರಾಜ್ ಇಂಜಿನಿ ಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಸಹಾಯಕ ಅಭಿಯಂತರ ವೆಂಕಟೇಶ್, ಗುತ್ತಿಗೆದಾರ ಕಿರಣ್ ಅಂದನೂರು ಉಪಸ್ಥಿತರಿದ್ದರು.

error: Content is protected !!