ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ: ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ: ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ

ದಾವಣಗೆರೆ, ಜ.18- ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆನ್ನಲಾದ ರಾಷ್ಟ್ರೀಯ ಸ್ವಯಂ ಸೇವಕ ಪರಿವಾರದ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು. ಸಾಮಾಜಿಕ, ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ನಡೆಸಿರುವ ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು   ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಬಣದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕೆಎಸ್ಸಾ ರ್ಟಿಸಿ ಬಸ್ ನಿಲ್ದಾಣಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರು ನಾಮಕರಣ ಮಾಡುವಂತೆ ಡಿಎಸ್ಸೆಸ್ಸ್ ಜಿಲ್ಲಾ ಸಂ ಚಾಲಕ ಕುಂದುವಾಡದ ಮಂಜುನಾಥ್ ಆಗ್ರಹಿಸಿದರು.

ಜಿಲ್ಲಾದ್ಯಂತ ಇರುವ ಗುಡಿಸಲು ವಾಸಿಗಳಿಗೆ ನಿವೇಶನ ಒದಗಿಸಬೇಕು. ತುರ್ಚಘಟ್ಟ ಗ್ರಾಮದ ದಲಿತರ ಕೇರಿ ಯಲ್ಲಿ ಅಂಬೇಡ್ಕರ್ ಭವನಕ್ಕೆ ಜಾಗ ಮಂಜೂರು ಮಾಡಿ, ಭವನ ನಿರ್ಮಾಣ ಮಾಡಿಕೊಡುವಂತೆ ಆಗ್ರಹಿಸಿದರು. ದಲಿತರ ಮೇಲಿನ ಸುಳ್ಳು ಪ್ರಕರಣಗಳನ್ನು ವಜಾಗೊಳಿಸು ವಂತೆ ಆಗ್ರಹಿಸಿದ ಅವರು, ದಲಿತರನ್ನು ಸ್ವಾವಲಂಬಿಗಳ ನ್ನಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೆ.ವಿಜಯಲಕ್ಷ್ಮಿ, ಪ್ರದೀಪ್, ಮಹಾಂತೇಶ್ ಹಾಲುವರ್ತಿ, ಆರ್.ಮಂಜುನಾಥ್, ಹನುಮಂತಪ್ಪ, ಖಾಲಿದ್ ಅಲಿ ಇತರರು ಪ್ರತಿಭಟನೆಯಲ್ಲಿದ್ದರು.

error: Content is protected !!