ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ : ವಚನಾನಂದ ಶ್ರೀ ಸಂತಸ

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ : ವಚನಾನಂದ ಶ್ರೀ ಸಂತಸ

ಹರಿಹರ, ಜ.18- ಮಾನವತಾ ವಾದಿ, ಸಮಾಜೋದ್ಧಾರಕ, ದಾರ್ಶನಿಕ, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಡಳಿತ ಪಕ್ಷದ ಸಂಪುಟದ ಸಚಿವರಿಗೆ ಅಭಿನಂದನೆ ತಿಳಿಸುವುದಾಗಿ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ವಚನಾನಂದ ಮಹಾಸ್ವಾಮೀಜಿ ಹೇಳಿದರು.

ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡಿ ಅವರು ಮಾತನಾಡಿದರು.  ನಾಡಿನ ಎಲ್ಲಾ ಸಮಾಜದ ಒಳಿತಿಗಾಗಿ ಬಸವಣ್ಣನವರು ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಅವರು ನೀಡಿರುವ ಕೊಡುಗೆಯಿಂದ ವಿಶ್ವಮಟ್ಟದ ನಾಯಕರಾಗಿ ಹೊರಹೊಮ್ಮಿದ ಬಸವಣ್ಣನವರನ್ನು ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ನಾಡಿನಾದ್ಯಂತ ಇರುವ ಎಲ್ಲಾ ಜನತೆಗೆ ಸಂತೋಷ ಮತ್ತು ಹರ್ಷವನ್ನು ತರಿಸಿದೆ ಎಂದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಮಠದ ಸ್ವಾಮಿಗಳು ಉಪಸ್ಥಿತರಿದ್ದರು. 

error: Content is protected !!