ದಾವಣಗೆರೆ,ಜ.18- ಜಿಲ್ಲಾ ಮಿನಿ ಲಾರಿ ಮಾಲೀಕರ ಮತ್ತು ಚಾಲಕರ ಸಂಘದವರು ಕೇಂದ್ರ ಸರ್ಕಾರದ ಅಪಘಾತಕ್ಕೆ ಸಂಬಂಧಿಸಿದಂತೆ 10 ವರ್ಷ ಜೈಲು ಮತ್ತು 7ಲಕ್ಷ ರೂ.ಗಳ ದಂಡದ ವಿರುದ್ಧ ಇಂದು ಕೃಷಿ ಮಾರುಕಟ್ಟೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸಂಘದ ಅಧ್ಯಕ್ಷ ಡಿ.ಇಸ್ಮಾಯಿಲ್, ಉಪಾಧ್ಯಕ್ಷ ಮೃತ್ಯುಂಜಯ, ಪ್ರಧಾನ ಕಾರ್ಯದರ್ಶಿ ಸೈಯದ್ ಜಾಕೀರ್ ಹುಸೇನ್, ಸಹಕಾರ್ಯದರ್ಶಿ ಸೈಯದ್ ಸಮೀಉಲ್ಲಾ ಹಾಗೂ ಸಂಘದ ಪದಾಧಿಕಾರಿಗಳು, ಚಾಲಕರು, ಹಾಗೂ ಲಾರಿ ಮಾಲೀಕರ ಸಂಘದ ಕಾರ್ಯದರ್ಶಿ ಸಿ.ಪವನ್ ಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.