ಹೊನ್ನಾಳಿ ವೃತ್ತ ನಿರೀಕ್ಷಕ ಸುನೀಲ್ ಕುಮಾರ್
ದಾವಣಗೆರೆ, ಜ. 23 – ಪೋಷಕರು ಮಕ್ಕಳಿಗೆ ಬರೀ ಓದಲು ಒತ್ತಡ ಹೇರದೆ, ವಿವಿಧ ಕ್ರೀಡೆಗಳಲ್ಲಿ ಆಸಕ್ತರಾಗಿ ಸಾಧನೆ ಮಾಡಲು ಸಹಕರಿಸಬೇಕು ಎಂದು ಹೊನ್ನಾಳಿ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ತಿಳಿಸಿದರು.
ಅವರು ನಗರದ ಸೇಂಟ್ ಜಾನ್ಸ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿ ಟಿ.ಎಂ. ಉಮಾಪತಯ್ಯ ಮಾತನಾಡಿ, ಎಲ್ಲಾ ಮಕ್ಕಳಲ್ಲೂ ವಿಶೇಷವಾದ ಶಕ್ತಿಯಿದೆ. ಅದನ್ನು ಗುರುತಿಸಿ ಪ್ರೋತ್ಸಾಹ ನೀಡಿದಾಗ ಮಕ್ಕಳು ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು.
ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್. ಅನಿಲ್‌ಕುಮಾರ್, ಖಜಾಂಚಿ ಪ್ರವೀಣ್ ಹುಲ್ಲುಮನೆ, ಶಾಲೆಯ ಪ್ರಾಂಶುಪಾಲರಾದ ಆರ್. ಸೈಯದ್ ಆರಿಫ್, ಶ್ರೀಮತಿ ಪ್ರೀತಾ ಟಿ.ರೈ, ಉಪ ಪ್ರಾಂಶುಪಾಲರಾದ ಶ್ರೀಮತಿ ನೇತ್ರಾವತಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ರಾಜ್ಯಮಟ್ಟದ ರಣಜಿ ಕ್ರಿಕೆಟ್ ಪಟು ಸುಹಾಸ್, ಕುಸ್ತಿಪಟು ಆದ್ಯಸಿರಿ, ಕರಾಟೆ ಚಾಂಪಿಯನ್ ಅಭಯ್ ಮತ್ತು ಪವನ್ ಅವರುಗಳನ್ನು ಸನ್ಮಾನಿಸಲಾಯಿತು.