ದಾವಣಗೆರೆ, ಜ. 23 – ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ಪ್ರಯುಕ್ತ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ರಾಮ ತಾರಕ ಹೋಮ ನಡೆಯಿತು.
ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ, ಪ್ರಸಾದ ಹಾಗೂ ಪಾನಕ ವಿತರಣೆ ನಡೆಯಿತು. ನಂತರ 11 ಗಂಟೆಗೆ ಅಯೋದ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀರಾಮದೇವರ ಪ್ರತಿಷ್ಠಾಪನೆ ಕಾರ್ಯಕ್ರಮ ನೇರ ಪ್ರಸಾರ ಪ್ರದರ್ಶನಕ್ಕೆ ದೇವಸ್ಥಾನ ಆವರಣದಲ್ಲಿ ಎಲ್ಇಡಿ ದೊಡ್ಡ ಪರದೆಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು.
ಸಾರ್ವಜನಿಕರು ಅಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಿಸಿದ ರಾಮಭಕ್ತರು ಕಣ್ತುಂಬಿಕೊಂಡು ಭಕ್ತಿ ಸಂತಸ ವ್ಯಕ್ತಪಡಿಸಿದರು.