ಹದಡಿಯ ಕನಕ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆ

ಹದಡಿಯ ಕನಕ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆ

ದಾವಣಗೆರೆ, ಜ. 28- ಹದಡಿಯ ಕನಕ ವಿವಿಧೋದ್ದೇಶ ಸಹಕಾರ ಸಂಘದ 2024-29ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಎ.ಹೆಚ್. ನಾಗರಾಜ್  ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಎಂ.ಆರ್.ಇಂದಿರಾ ದಳವಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ದಿನಾಂಕ ಜನವರಿ 20 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿ ಜಿ.ಎಸ್. ಸುರೇಂದ್ರ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಕಾರ್ಯದರ್ಶಿ ಯೋಗೀಶ್ ಎಲ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: Content is protected !!