ಕ್ಯಾಂಪಸ್ ಟು ಕಾರ್ಪೊರೇಟ್ ಕಾರ್ಯಾಗಾರ

ಕ್ಯಾಂಪಸ್ ಟು ಕಾರ್ಪೊರೇಟ್ ಕಾರ್ಯಾಗಾರ

 ದಾವಣಗೆರೆ, ಜ.28- ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ   ಕ್ಯಾಂಪಸ್ ಟು ಕಾರ್ಪೊರೇಟ್ ಎಂಬ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಎಇಎಂ ಡೆವಲಪರ್ ಅಟ್ ಇನ್ಫೋಸಿಸ್ ಮೈಸೂರಿನ ಶ್ರೀ ಸುಷ್ಮೇಂದ್ರ ಎನ್. ರಾವ್ ಹಾಗೂ ಇನ್ಫಾರ್ಮೇಶನ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಟಿ. ಎಂ. ವೀರಗಂಗಾಧರ ಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಜಗತ್ತು ಮತ್ತು ಅಲ್ಲಿನ ಪರಿಸ್ಥಿತಿ ಬಗ್ಗೆ ಅರಿವು ಮೂಡಿಸಿದರು.

 ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಟಿ. ಆರ್.  ತೇಜಸ್ವಿ ಕಟ್ಟಿಮನಿ ಮಾತನಾಡಿ, ಈ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ ಕಾರ್ಪೊರೇಟ್ ಜಗತ್ತಿನಲ್ಲಿ ಕೆಲಸ ಸಿಗುವುದು ತುಂಬಾ ಕಷ್ಟ, ಆದರೂ ಕಾಲೇಜಿನ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಉದ್ಯೋಗಾವಕಾಶ ಕಲ್ಪಿಸುವುದಾಗಿ ಭರವಸೆ ಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಬಿ. ಸಂಜಯ್ ಪಾಂಡೆ  ವಹಿಸಿದ್ದರು.  ಸೌಮ್ಯ ಎತ್ತಿನಹಳ್ಳಿ, ಎಂ. ವಿ. ಪೂಜಾ ಹಾಗೂ ಇನ್ಫಾರ್ಮೇಶನ್ ಸೈನ್ಸ್ ವಿಭಾಗದ ಅಧ್ಯಾಪಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!