ಚಿತ್ರದುರ್ಗ, ಜ.28- ನಗರದ ಹೊರ ವಲಯದಲ್ಲಿರುವ ಮಾದಾರ ಚೆನ್ನಯ್ಯ ಗುರುಪೀಠದ ಬಳಿ ಭಾನುವಾರ ಹಮ್ಮಿಕೊಂಡಿದ್ದ ಶೋಷಿತ ಜನರ ಸಮಾವೇಶದಲ್ಲಿ ಪಾಲ್ಗೊಂಡ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಆಶೀರ್ವಾದ ಪಡೆದರು.
ಈ ವೇಳೆ ಹಾಜರಿದ್ದ ಹಿಂದುಳಿದ, ದಲಿತ ಮಠಾಧೀಶರು ಕಾಂತರಾಜ ವರದಿಯನ್ನು ಒಪ್ಪಿಕೊಂಡು ಅನುಷ್ಠಾನಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಹಕ್ಕೊತ್ತಾಯ ಮಾಡಿದರು. ನಂತರ ಸಿದ್ದರಾಮಯ್ಯ ಅವರು ಮಂಜರಿ ಹನುಮಂತಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಎಸ್‌ಜೆಎಸ್ ಸಮೂಹ ವಿದ್ಯಾಸಂಸ್ಥೆಗಳ ಶಾಲಾ ವಾರ್ಷಿ ಕೋತ್ಸವ ಉದ್ಘಾಟಿಸಿ ಶುಭ ಕೋರಿದರು.