ಶ್ರೀ ಶಂಕರ ಸಮುದಾಯ ಭವನದಲ್ಲಿ ವಸ್ತುಗಳ ಪ್ರದರ್ಶನ, ಮಾರಾಟ ಮೇಳ

ಶ್ರೀ ಶಂಕರ ಸಮುದಾಯ ಭವನದಲ್ಲಿ  ವಸ್ತುಗಳ ಪ್ರದರ್ಶನ, ಮಾರಾಟ ಮೇಳ

ದಾವಣಗೆರೆ, ಜ. 29- ದಾವಣಗೆರೆ ನಗರದ ರಿಂಗ್ ರಸ್ತೆಯಲ್ಲಿನ ಶಾರದಾಂಬೆ ದೇವಸ್ಥಾನ ಪಕ್ಕದಲ್ಲಿರುವ ಶ್ರೀ ಶಂಕರ ಸಮುದಾಯ ಭವನದಲ್ಲಿ ಈಚೆಗೆ ತರಹೇವಾರಿ ಆಹಾರ, ಹಪ್ಪಳ, ಶೆಂಡಿಗೆ, ಉಪ್ಪಿನಕಾಯಿ, ಕರಕುಶಲ ವಸ್ತುಗಳು,  ಬೆಡ್‌ಶೀಟ್, ಬೆಡ್‌ಸ್ಪ್ರೆಡ್ ಸೇರಿ ನಾನಾ ವಸ್ತುಗಳ ಪ್ರದರ್ಶನ ಮಾರಾಟ ಮೇಳ ನಡೆಯಿತು.

ತಾಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ದಾವಣಗೆರೆಯ ಗೃಹೋದ್ಯಮಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಶಂಕರ ಸಮುದಾಯ ಭವನದಲ್ಲಿ ಸ್ಪೂರ್ತಿ 2024 ವಸ್ತು ಪ್ರದರ್ಶನ ಮತ್ತು ಆಹಾರ ಮೇಳ ಆಯೋಜಿಸಲಾಗಿತ್ತು. ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ವ್ಯಾಪಾರಿಗಳು, ಆಹಾರೋತ್ಪನ್ನ ಉತ್ಪಾದಕರು ಮೇಳದಲ್ಲಿ ಭಾಗವಹಿಸಿದ್ದರು. 

ಮೇಳ ಕುರಿತು ಮಾತನಾಡಿದ ಬ್ರಾಹ್ಮಣ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಡಾ. ಶಶಿಕಾಂತ್, ಸ್ಥಳೀಯ ಗೃಹೋದ್ಯಮಿಗಳು ಮತ್ತು ವ್ಯಾಪಾರಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಾಗೂ ಅವರ ಉತ್ಪನ್ನಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಮೇಳ ಹಮ್ಮಿಕೊಳ್ಳಲಾಗಿದೆ. ಯುವಜನತೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಬದಲು ತಮ್ಮ ಊರಲ್ಲೇ ಸ್ವಂತ, ಸಣ್ಣ ಉದ್ಯಮ ಆರಂಭಿಸುವ ಮೂಲಕ ಸ್ವಂತ ಕಾಲಮೇಲೆ ನಿಲ್ಲಬೇಕು. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಸಹಕಾರ ನೀಡಬೇಕು ಎಂದರು.

ಹಿರಿಯ ವಕೀಲ ಜೆ.ಎಚ್. ವಸಂತ ಕುಮಾರ್ ಹಾಗೂ ಬಾಪೂಜಿ ಸಂಸ್ಥೆ ನಿರ್ದೇಶಕ ಡಾ. ಸಂಪನ್‌ ಮುತಾಲಿಕ್ ಮೇಳಕ್ಕೆ ಚಾಲನೆ ನೀಡಿದರು. ಸಮಾಜದ ಕಾರ್ಯದರ್ಶಿ ಗೋಪಾಲ್ ದಾಸ್, ನಿರ್ದೇಶಕರಾದ ಸತ್ಯನಾರಾಯಣ, ಡಿ. ಶೇಷಾಚಲ, ಭಾಸ್ಕರ ಭಟ್, ರಾಮಚಂದ್ರ ರಾವ್, ಉಮೇಶ್ ಕುಲಕರ್ಣಿ, ಉಮಾಕಾಂತ್ ದೀಕ್ಷಿತ್, ಶಂಕರ ಸಮುದಾಯ ಭವನದ ಅಧ್ಯಕ್ಷ ಡಾ. ಬಿ.ಟಿ. ಅಚ್ಯುತ್ ಇತರರಿದ್ದರು.

error: Content is protected !!