ಹೊನ್ನಾಳಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕನಕದಾಸರ ಕಂಚಿನ ಪ್ರತಿಮೆ ಅನಾವರಣ : ಬಿ. ಸಿದ್ದಪ್ಪ

ಹೊನ್ನಾಳಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕನಕದಾಸರ ಕಂಚಿನ ಪ್ರತಿಮೆ ಅನಾವರಣ : ಬಿ. ಸಿದ್ದಪ್ಪ

ಹೊನ್ನಾಳಿ, ಫೆ.2- ಪಟ್ಟಣದ ದೇವನಾಯಕನ ಹಳ್ಳಿಯ ಟಿ.ಬಿ. ವೃತ್ತದಲ್ಲಿ ನಾಳೆ ದಿನಾಂಕ 3 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಭಕ್ತ ಕನಕದಾಸರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣ ಮಾಡಲಿದ್ದಾರೆ ಎಂದು ತಾಲ್ಲೂಕಿನ ಕುರುಬ ಸಮಾಜದ ಮಾಜಿ ಕಾರ್ಯಾಧ್ಯಕ್ಷರು ಹಾಗೂ ಪ್ರತಿಮೆ ಅನಾವರಣ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಬಿ.ಸಿದ್ದಪ್ಪ ಹೇಳಿದರು.

ಗುರುವಾರ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಕರಪತ್ರಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.  ಶನಿವಾರ ಕಾರ್ಯಕ್ರಮಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕನಕದಾಸರ ಪ್ರತಿಮೆವರೆಗೂ ವಿವಿಧ ಮಠಾಧೀಶರನ್ನು ಹಾಗೂ ಗಣ್ಯರನ್ನು 101 ಪೂರ್ಣಕುಂಭದೊಂದಿಗೆ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದರು.  

ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.  ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕನಕ ಗುರುಪೀಠದ ತಿಂಥಿಣಿ ಶಾಖಾ ಮಠದ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಹಿರೇಕಲ್ಮಠದ ಶ್ರೀ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಗಳು ಉಪಸ್ಥಿತರಿರುವರು. 

ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸುವರು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಡಿ.ಜಿ.ಶಾಂತನಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ಸಚಿವರಾದ ಮಧು ಬಂಗಾರಪ್ಪ, ಜಮೀರ್‌ ಅಹ್ಮದ್, ಸಂತೋಷ್‌ ಲಾಡ್, ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಐಎಎಸ್ ಇನ್‌ಸೈಟ್‌ನ ಸಂಸ್ಥಾಪಕ ಜಿ.ಬಿ. ವಿನಯ್‍ಕುಮಾರ್ ಆಗಮಿಸಲಿದ್ದಾರೆ ಎಂದರು.  

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್, ಮಾಜಿ ಸಚಿವ ಭೈರತಿ ಬಸವರಾಜ್, ಎಚ್.ವಿಶ್ವನಾಥ್, ಎಚ್.ಎಂ.ರೇವಣ್ಣ, ಕೆ.ಎಸ್.ಈಶ್ವರಪ್ಪ, ಶಿವಮೊಗ್ಗದ ಎಂ.ಶ್ರೀಕಾಂತ್ ಉಪಸ್ಥಿತರಿರುತ್ತಾರೆ ಎಂದರು.  

ಕನಕದಾಸರ ಕಂಚಿನ ಪ್ರತಿಮೆ ಅನಾವರಣ ಸಮಾರಂಭಕ್ಕೆ ಅವಳಿ ತಾಲ್ಲೂಕಿನ ಕುರುಬ ಸಮಾಜದ ಮುಖಂಡರು ಹಾಗೂ ಇತರೆ ಸಮಾಜಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕುರುಬರ ಸಂಘದ ಅಧ್ಯಕ್ಷ ಎಂ.ಎಸ್. ಪಾಲಾಕ್ಷಪ್ಪ ಹೇಳಿದರು.  

ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡರಾದ ಎಚ್.ಎ. ಉಮಾಪತಿ, ಎಚ್.ಬಿ. ಶಿವಯೋಗಿ, ದಿಡಗೂರು ಪಾಲಾಕ್ಷಪ್ಪ, ಕರವೇ ಅಧ್ಯಕ್ಷ ಶ್ರೀನಿವಾಸ್, ಪುರಸಭಾ ಸದಸ್ಯ ಬಾಬು ಹೋಬಳದಾರ್, ಎಚ್.ಎ. ರಂಜಿತ್, ರಾಜು ಕಣಗಣ್ಣಾರ್, ಹಾಲುಮತ ಸಮಾಜದ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸೌಮ್ಯ ಮೂಲೇರ್, ತಾಲ್ಲೂಕು ಘಟಕದ ಅಧ್ಯಕ್ಷೆ ಪಂಕಜಾ ಅರುಣ್‍ಕುಮಾರ್ ಹಾಜರಿದ್ದರು.

error: Content is protected !!