ಗುತ್ತಿಗೆದಾರರಿಗೆ ಶಾಸಕ ಬಿ.ದೇವೇಂದ್ರಪ್ಪ ಸೂಚನೆ
ಜಗಳೂರು, ಫೆ.5- ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು, ಗುಣಮಟ್ಟದ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರಿಗೆ ಶಾಸಕ ಬಿ.ದೇವೇಂದ್ರಪ್ಪ ಖಡಕ್ ಸೂಚನೆ ನೀಡಿದರು.
ಪಟ್ಟಣದ ಕೆಇಬಿ ನೂತನ ಕಛೇರಿ ಕಟ್ಟಡ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಹೆಚ್ಚುವರಿ ಕೊಠಡಿಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಗಳ ಸಂಖ್ಯೆಗನುಗುಣವಾಗಿ ಕೊಠಡಿಗಳ ಅವಶ್ಯಕತೆ ಯಿದೆ. ಅಲ್ಲದೆ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ಗೆ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಹೊಸ ಕೊಠಡಿಗಳು ಅನುಕೂಲವಾಗಲಿವೆ. ಹಂತ ಹಂತವಾಗಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದರು.
ಕೆಇಬಿ ಇಲಾಖೆ ಉಪವಿಭಾಗೀಯ ಕಛೇರಿಯ ಹಳೆ ಕಟ್ಟಡದ ಕಿಷ್ಕಿಂಧೆಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿ ಸಬೇಕಿತ್ತು. ಆದ್ದರಿಂದ ಹಳೆ ಕಟ್ಟಡವನ್ನು ತೆರವುಗೊಳಿಸಿ, 85.51 ಲಕ್ಷ ರೂ.ವೆಚ್ಚದಲ್ಲಿ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕುಮಾರ್, ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಕೆಪಿಸಿಸಿ ಸದಸ್ಯ ಕಲ್ಲೇಶ್ರಾಜ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಗೌಸ್ ಪೀರ್, ಮಾಳಮ್ಮನಹಳ್ಳಿ ವೆಂಕಟೇಶ್, ಬೆಸ್ಕಾಂ ಎಇಇ ಸುಧಾಮಣಿ, ಪ್ರಾಂಶುಪಾಲ ಜಗದೀಶ್, ಬಿಆರ್ಸಿ ಡಿ.ಡಿ. ಹಾಲಪ್ಪ, ಗುತ್ತಿಗೆದಾರರು, ಬೆಸ್ಕಾಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.