ಹರಪನಹಳ್ಳಿ : ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗಬಾರದು

ಹರಪನಹಳ್ಳಿ : ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗಬಾರದು

 ಹರಪನಹಳ್ಳಿ, ಫೆ.9- ತಾಲ್ಲೂಕಿನ ಅರಸೀಕೆರೆ ಗ್ರಾಮದ ಎಸ್‍ಎಂಸಿಕೆ ಪದವಿ ಪೂರ್ವ ಕಾಲೇಜಿನಲ್ಲಿ  ಶಾರದಾ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಪ್ರೊ. ಲಿಂಗಣ್ಣ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಗ್ರಾಮಸ್ಥರ ಸಹಕಾರದೊಂದಿಗೆ  1989ರಲ್ಲಿ ಎಸ್‍ಎಂಸಿಕೆ ಕಾಲೇಜು ಸ್ಥಾಪಿಸಲಾಯಿತು ಎಂದು ಹೇಳಿದರು. ಈ ಕಾಲೇಜಿನ ಅನೇಕ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ, ನೀವೂ ಸಹ ಅವರಂತೆ ಉನ್ನತ ಹುದ್ದೆಗೆ ಹೋಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಂತರ ಪ್ರಶಾಂತ್ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಚನ್ನಾಗಿ ಅಭ್ಯಾಸ ಮಾಡಿ ಉನ್ನತ ಸ್ಥಾನ ಪಡೆೆದು ಗ್ರಾಮಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಹೇಳಿದರು. 

ಪ್ರಾಚಾರ್ಯ ಡಾ. ಎಂ. ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೇ, ನೈತಿಕ ಶಿಕ್ಷಣವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ಉಪನ್ಯಾಸಕ ಡಾ. ಆರ್. ಭೀಮಪ್ಪ, ಕುಮಾರ್‍ನಾಯ್ಕ್, ಉಮಾದೇವಿ, ಜಾತಯ್ಯ, ಸೋಮಶೇಖರ್ ಕಿಚಡಿ, ಪೂಜಾರ್ ಮರಿಯಪ್ಪ, ಎ. ಹೆಚ್. ಉಮೇಶ್, ಸಿದ್ದರಾಮನಗೌಡ, ರುದ್ರೇಶ್, ಕೆ. ಶಿವಯೋಗಿ, ಪಿ. ದುರುಗೇಶ್, ಈಶಪ್ಪ ಉಪಸ್ಥಿತರಿದ್ದರು. 

error: Content is protected !!