ದಾವಣಗೆರೆ, ಫೆ. 15 – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ನಿಟ್ಟುವಳ್ಳಿಯಲ್ಲಿ ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಧನಂಜಯ್ ಕಡ್ಲೇಬಾಳ್, ಐರಣಿ ಅಣ್ಣೇಶ್, ಅನೀಲ್‍ಕುಮಾರ್‍ನಾಯ್ಕ, ಪಾಲಿಕೆ ಸದಸ್ಯ ಕೆ.ಎಂ. ವೀರೇಶ್, ಮಾಜಿ ದೂಡಾ ಅಧ್ಯಕ್ಷ ಎ.ವೈ. ಪ್ರಕಾಶ್, ಬಿಜೆಪಿ ಮುಖಂಡರಾದ ಮುಕುಂದಪ್ಪ, ಶಶಿಧರ್ ಓಡೆಯರ್ ಹಾಗೂ ಇತರರು ಉಪಸ್ಥಿತರಿದ್ದರು.