ದಾವಣಗೆರೆ, ಫೆ. 23- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೊನ್ನೆ ನಡೆದ ದಾವಣಗೆರೆ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸ್ಥಳೀಯ ನ್ಯಾಯಾಲಯದ ದ್ವಿತೀಯ ದರ್ಜೆ ಸಹಾಯಕ ದಾಸಪ್ಪ ಹೆಚ್. ಅವರು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ದಾಸಪ್ಪ ಅವರನ್ನು ದಾವಣಗೆರೆ ವಕೀಲರ ಸಹಕಾರ ಸಂಘದ ನಿರ್ದೇಶಕ ಎ.ಸಿ. ರಾಘವೇಂದ್ರ, ಪ್ರಧಾನ ಸಿವಿಲ್ ನ್ಯಾಯಾಲಯದ ಶಿರಸ್ತೇದಾರ ಎನ್. ಮಾರುತಿ ಪ್ರಸಾದ್, ಕೆ.ಎಂ. ಮಂಜುನಾಥ್ ಅಭಿನಂದಿಸಿದ್ದಾರೆ.