ತುರ್ತು ಸಂದರ್ಭಗಳಲ್ಲಿ ಜನ, ಜಾನುವಾರು, ಆಸ್ತಿ ಪಾಸ್ತಿಗಳ ರಕ್ಷಣೆ ನಮ್ಮ ಜವಾಬ್ದಾರಿ

ತುರ್ತು ಸಂದರ್ಭಗಳಲ್ಲಿ ಜನ, ಜಾನುವಾರು, ಆಸ್ತಿ ಪಾಸ್ತಿಗಳ ರಕ್ಷಣೆ ನಮ್ಮ ಜವಾಬ್ದಾರಿ

ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್

ದಾವಣಗೆರೆ, ಫೆ.27- ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಆಗುವ ನಷ್ಟವನ್ನು ತಡೆಗಟ್ಟಲು ಮುನ್ನೆಚ್ಚರಿಕೆಯಿಂದ ಅಗತ್ಯ ಸಿದ್ದತೆ ಮಾಡಿಕೊಂಡಲ್ಲಿ ಆಗಬಹುದಾದ ಜನ, ಜಾನುವಾರು, ಮೂಲಭೂತ ಸೌಕರ್ಯದ ನಷ್ಟವನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡದಿಂದ ಕಚೇರಿ ಸಿಬ್ಬಂದಿ, ಅರಣ್ಯ, ಪೊಲೀಸ್, ಸಾರಿಗೆ, ಕೆ.ಎಸ್.ಆರ್.ಟಿ.ಸಿ. ಗೃಹ ರಕ್ಷಕ ದಳ ಸಿಬ್ಬಂದಿಗಳಿಗೆ ತುರ್ತು ಸಂದದರ್ಭದಲ್ಲಿ ರಕ್ಷಣಾ ಕಾರ್ಯವಿಧಾನಗಳ ಕುರಿತು ಸಾಮರ್ಥ್ಯ ಹೆಚ್ಚಿಸುವ ಅಣಕು ಪ್ರದರ್ಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ಪ್ರಾಕೃತಿಕ ವಿಕೋಪ ಸೇರಿದಂತೆ ಆಕಸ್ಮಿಕವಾಗಿ ನಡೆಯುವ ಘಟನೆಗಳಿಂದಾಗುವ ನಷ್ಟವನ್ನು ತಪ್ಪಿಸಲು ಮತ್ತು ತಡೆಯಲು ತಕ್ಷಣದ ಕಾರ್ಯಾಚರಣೆ ಬಹಳ ಮುಖ್ಯವಾಗಿರುತ್ತದೆ. ಆಕಸ್ಮಿಕ ಘಟನೆಗಳು ನಡೆದಾಗ ತುರ್ತು ಕಾರ್ಯಾಚರಣೆಗೆ ಸದಾ ಸನ್ನದ್ದವಾಗಿರಬೇಕಾಗುತ್ತದೆ ಎಂದರು. 

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ಹಾಗೂ ಇತರರು ಉಪಸ್ಥಿತರಿದ್ದರು.  

error: Content is protected !!