ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮರು ಪ್ರತಿಷ್ಠಾಪನೆಗೆ ಒತ್ತಾಯಿಸಿ ಪ್ರತಿಭಟನೆ

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮರು ಪ್ರತಿಷ್ಠಾಪನೆಗೆ ಒತ್ತಾಯಿಸಿ ಪ್ರತಿಭಟನೆ

ಮಲೇಬೆನ್ನೂರು, ಫೆ. 27- ಭಾನುವಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ತೆರವುಗೊಳಿಸಿ ರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿ ಮೆಯನ್ನು ಮರು ಪ್ರತಿಷ್ಠಾಪಿಸಬೇಕು ಮತ್ತು ಅನಧಿಕೃತ ವಾಗಿ ನಿರ್ಮಿಸಿರುವ ವಾಲ್ಮೀಕಿ ನಾಮಫಲಕ ಹಾಗೂ ಮದಕರಿ ನಾಯಕ ಮಹಾದ್ವಾರವನ್ನು ತೆರವುಗೊಳಿಸಬೇಕೆಂದು ಭಾನುವಳ್ಳಿಯಲ್ಲಿ ಮಂಗಳವಾರ ಕುರುಬ ಸಮಾಜ ದವರು ಅನಿರ್ದಿಷ್ಟಾವಧಿ ಶಾಂತಿಯುತ ಪ್ರತಿಭಟನೆಯನ್ನು ನಂದಿಗುಡಿಯ ರಸ್ತೆಯಲ್ಲಿ ಆರಂಭಿಸಿದ್ದಾರೆ.

ಇದಕ್ಕೂ ಮುನ್ನ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕುರುಬ ಸಮಾಜ ದವರು  ನಂತರ ಗ್ರಾ.ಪಂ.ಗೆ ಮನವಿ ಪತ್ರ ಸಲ್ಲಿಸಿದರು.

ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಮರು ಪ್ರತಿಷ್ಠಾಪಿಸುವವರೆಗೂ ಪ್ರತಿಭಟನೆಯನ್ನು ನಡೆಸುವುದಾಗಿ ತಾ.ಪಂ. ಮಾಜಿ ಅಧ್ಯಕ್ಷ ಹೆಚ್.ಕೆ. ಕನ್ನಪ್ಪ, ಹೆಚ್.ಎಸ್.ಕರಿಯಪ್ಪ, ಯು.ಕೆ. ಅಣ್ಣಪ್ಪ ತಿಳಿಸಿದ್ದಾರೆ.

ಪ್ರತಿಭಟನೆಯ ವಿಷಯ ತಿಳಿದ ತಕ್ಷಣ ಎಎಸ್ಪಿ ವಿಜಯಕುಮಾರ್, ತಹಶೀಲ್ದಾರ್ ಗುರುಬಸವರಾಜ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲೇ ಸಭೆ ಕರೆದು, ನಿಮ್ಮ ಸಮ್ಮುಖದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಗ್ರಾಮದಲ್ಲಿ ಶಾಂತಿ ಕೆದಡದಂತೆ ನೋಡಿಕೊಳ್ಳಿ ಎಂದರು.

ಸಿಪಿಐ ಸುರೇಶ್ ಸಗರಿ, ಪಿಎಸ್ಐ ಪ್ರಭು ಕೆಳಗಿನಮನೆ ಅವರ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಸೋಮವಾರ ದಾವಣಗೆರೆಯ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

error: Content is protected !!