ಶಿಸ್ತು ಪರಿಪಾಲನೆ, ಕಠಿಣ ಶ್ರಮದಿಂದ ಯಶಸ್ಸು ಸಾಧ್ಯ

ಶಿಸ್ತು ಪರಿಪಾಲನೆ, ಕಠಿಣ ಶ್ರಮದಿಂದ ಯಶಸ್ಸು ಸಾಧ್ಯ

ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿಟಿಯು ಕುಲಪತಿ ಡಾ. ಎಸ್. ವಿದ್ಯಾಶಂಕರ 

ದಾವಣಗೆರೆ, ಮಾ. 13- ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಪರಿಪಾಲನೆಯ ಜೊತೆಗೆ ಕಠಿಣ ಪರಿಶ್ರಮದೊಂದಿಗೆ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣಲು ಸಾಧ್ಯವೆಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ವಿದ್ಯಾಶಂಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ವಿಶ್ವವಿದ್ಯಾಲಯ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿನ್ನೆ ಏರ್ಪಾಡಾಗಿದ್ದ ಕಾಲೇಜಿನ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಕಾರ್ಯಕಲಾಪಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹಾಗೂ ಗುಣ ಮಟ್ಟದ ಶಿಕ್ಷಣದ ಅವಶ್ಯಕತೆ ಇದ್ದು, ಇದಕ್ಕೆ ಅನುಗುಣವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿಶ್ವವಿದ್ಯಾಲಯ ದಿಂದ 6 ಸ್ಕಿಲ್ ಡೆವಲೆಪ್‍ಮೆಂಟ್ ಲ್ಯಾಬ್‍ಗಳನ್ನು ಪ್ರಾರಂಭಿಸ ಲಾಗಿದ್ದು, ಇವುಗಳ ಸದುಪಯೋಗ ಗಳನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಾಗೆ ಹತ್ತು ಹಲವಾರು ಉಪಯುಕ್ತ ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದಿದ್ದು, ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಿ.ಇ. ರಂಗಸ್ವಾಮಿ ಅವರು ಮಾತನಾಡಿ, ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ವಿದ್ಯಾರ್ಜನೆಯ ಕಡೆಗೆ ಮನಸ್ಸು ಮಾಡಿ ಕಾರ್ಯಪ್ರವೃತ್ತರಾದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಫಲಿತಾಂಶ ಪಡೆಯಲು ಸಾಧ್ಯವೆಂದು ಕಿವಿಮಾತು ಹೇಳಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಕಾಡೆಮಿಕ್ ಸೆನೆಟ್ ಸದಸ್ಯ ಡಾ. ಡಿ. ಅಬ್ದುಲ್ ಬುಡೇನ್‍ ವಿದ್ಯಾರ್ಥಿಗಳ ಕುರಿತು ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಜೀವನದಲ್ಲಿ ಉತ್ತಮ ಮೌಲ್ಯ  ಅಳವಡಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಪ್ರಾಧ್ಯಾಪಕರು ಮತ್ತು ಡೀನ್ ಡಾ. ಎಸ್. ಮಂಜಪ್ಪ ಮಾತನಾಡಿ, ಬರುವ ದಿನಗಳಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಬೇಕಾಗುವ ಹಲವಾರು ಉಪಯುಕ್ತ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ, ಯತ್ನಿಕ್ ಡೇ, ಚೈತ್ರ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸುವುದಾಗಿ  ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಡಿ. ಪಿ. ನಾಗರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಯ ಕತ್ವದ ಗುಣಗಳನ್ನು ಹೊಂದಬೇಕಾದರೆ ನಂಬಿಕೆ, ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪದ ಕಡೆಗೆ ಗಮನಹರಿಸಬೇಕೆಂದು ನುಡಿದರು.

ಕಾರ್ಯಕ್ರಮದಲ್ಲಿ ಡೀನ್‌ಗಳಾದ ಡಾ. ಟಿ. ಡಿ. ವಿಷ್ಣುಮೂರ್ತಿ (ಆಡಳಿತ), ಡಾ. ಈರಪ್ಪ ಸೊಗಲದ (ಶೈಕ್ಷಣಿಕ), ಡಾ. ಮಂಜಾ ನಾಯ್ಕ್ ಎನ್. (ಸ್ಟೂಡೆಂಟ್ ವೆಲ್ಪೇರ್), ಡಾ. ಕೆ. ಮಂಜುನಾಥ್      (ಐ ಅಂಡ್ ಡಿ), ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ. ಕೆ. ಎಸ್. ಅಪ್ರಮೇಯ, ಡಾ. ಮಲ್ಲಿಕಾರ್ಜುನ ಎಸ್. ಹೊಳಿ, ಡಾ. ಎಸ್. ಬಿ. ಮಲ್ಲೂರ್, ಡಾ. ಎನ್. ನಾಗೇಶ್ ಡಾ. ಎಸ್. ಬಸವ ರಾಜಪ್ಪ ಮತ್ತು ಪ್ರೊ. ಎಂ. ಹೆಚ್. ದಿವಾಕರ್  ಉಪಸ್ಥಿತರಿದ್ದರು.

error: Content is protected !!