ದಾವಣಗೆರೆ, ಮಾ.20- ತರಗತಿಗಳಲ್ಲಿ ಶಿಕ್ಷಕರು ಮೊಬೈಲ್ ಬಳಸುತ್ತಿರು ವುದು ಮತ್ತು ಆಹಾರ ಪದಾರ್ಥಗಳಲ್ಲಿ ಟೇಸ್ಟಿಂಗ್ ಪೌಡರ್ ಬಳಕೆ ನಿಷೇಧಿಸು ವಂತೆ ಆಗ್ರಹಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯು ಜಿಲ್ಲಾಧಿಕಾ ರಿಗಳಿಗೆ ಮನವಿ ಸಲ್ಲಿಸಿತು. ಇತ್ತೀಚಿನ ದಿನಗಳಲ್ಲಿ ಅಂಗಡಿಗಳ ಆಹಾರದಲ್ಲಿ ಹೆಚ್ಚಾಗಿ ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿದ್ದು, ಇಂತಹ ಆಹಾರ ತಿಂದವರು ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೆ ತುತ್ತಾಗುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಟಿ.ಟಿ. ಸುಧೀಂದ್ರ ಕುಮಾರ್, ಮಹಿಳಾ ಅಧ್ಯಕ್ಷೆ ಪುಷ್ಪಾ, ವನಿತಾ, ಆಶಾ, ಪ್ರಶಾಂತ, ಮಂಜುನಾಥ್, ಅರುಣಕುಮಾರ್, ಮಂಜುಳ ಹಾಗೂ ಇತರರಿದ್ದರು