ಹರಪನಹಳ್ಳಿ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ

ಹರಪನಹಳ್ಳಿ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ

ಹರಪನಹಳ್ಳಿ, ಮಾ. 21 – ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗೆ ತಾಲ್ಲೂಕಿನಲ್ಲಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ (ಅಭಿವೃದ್ಧಿ) ಸಂಸ್ಥೆಯ ಉಪ ನಿರ್ದೇಶಕಿ ಹನುಮಕ್ಕ ತಿಳಿಸಿದರು. ಗುರುವಾರ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮತನಾಡಿದ ಅವರು. ತಾಲ್ಲೂಕಿನಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ, ಶುದ್ದ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಆಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿ ಯು. ಬಸವರಾಜಪ್ಪ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಕೆ. ಷಣ್ಮುಖಪ್ಪ ಬಿಆರ್‍ಸಿ ಹೊನ್ನೆತೆಪ್ಪ, ಶಿಕ್ಷಣ ಸಂಯೋಜಕಿ ಲಕ್ಷ್ಮಿರಂಗಣ್ಣನವರ್ ಸೇರಿದಂತೆ ಇತರರು ಇದ್ದರು.

error: Content is protected !!