ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

ದಾವಣಗೆರೆ: ಇಂದಿನಿಂದ  ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಲಿದ್ದು, ಜಿಲ್ಲೆ ಯಲ್ಲಿ ಸಕಲ  ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ 82 ಕೇಂದ್ರಗಳಲ್ಲಿ 11131 ಹುಡುಗರು ಹಾಗೂ 11130 ಹುಡುಗಿಯರು ಸೇರಿ ಒಟ್ಟು 22,261 ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ. 

ಜಿಲ್ಲೆಯಲ್ಲಿ 10 ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿವೆ. ಒಟ್ಟರೆ 82 ಮುಖ್ಯ ಅಧೀಕ್ಷಕರು, 16 ಉಪ ಮುಖ್ಯ ಅಧೀಕ್ಷಕರು ಹಾಗೂ 82 ಸ್ಥಾನಿಕ ಜಾಗೃತ ದಳ ಅಧಿಕಾರಿಗಳು ಪರೀಕ್ಷಾ ಪ್ರಕ್ರಿಯೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಈ ಬಾರಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ.

error: Content is protected !!