ಜಿಲ್ಲಾಡಳಿತದಿಂದ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ

ದಾವಣಗೆರೆ, ಮಾ.26- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಜಿಲ್ಲಾ ಬಲಿಜ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿಯ ಯನ್ನು ನಗರದ ಬಲಿಜ ವಿದ್ಯಾರ್ಥಿ ನಿಲಯದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರಿನ್ ಭಾನು ಎಸ್. ಬಳ್ಳಾರಿ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಯೋಗಿನಾರೇಯಣ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ಬಲಿಜ ಸಂಘದ ಮಹಿಳಾ ಜಿಲ್ಲಾಧ್ಯಕ್ಷರಾದ ಜಯದೇವಮ್ಮ, ಶ್ರೀಧರ್, ರಮಣಯ್ಯ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

error: Content is protected !!