ಪೊಲೀಸ್ ಇಲಾಖೆಯಲ್ಲಿ ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆ

ಪೊಲೀಸ್ ಇಲಾಖೆಯಲ್ಲಿ  ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆ

ದಾವಣಗೆರೆ, ಮಾ. 31- ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಮೂವರು ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಏರ್ಪಾಡಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಆತ್ಮೀಯವಾಗಿ ಗೌರವಿಸಿ, ಬೀಳ್ಕೊಡಲಾಯಿತು.

ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ  ಚಂದ್ರು, ಡಿಎಆರ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಆರ್ ಎಸ್ ಐ  ಆರ್. ಮಂಜಪ್ಪ ರೆಡ್ಡಿ, ಬಡಾವಣೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ  ಜೆ. ಶಿವಪ್ಪ ಅವರುಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಅವರು ಸನ್ಮಾನಿಸಿ, ನಿವೃತ್ತಿ ಜೀವನಕ್ಕೆ ಶುಭ ಕೋರಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿ ಮೆಹಬೂಬ್ ಎ. ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಮತ್ತು ನಿವೃತ್ತರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

error: Content is protected !!