ದಾವಣಗೆರೆ, ಏ. 2- ದಾವಣಗೆರೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದಿರುವ ವ್ಯಂಗ್ಯ ಚಿತ್ರಕಾರ ಹೆಚ್.ಬಿ. ಮಂಜುನಾಥ ಅವರನ್ನು ದಾವಣಗೆರೆ-ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಎನ್.ಎ. ಮುರುಗೇಶ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಮತಿ ಜಯಮ್ಮ ಪರಶುರಾಮಪ್ಪ ಹಾಗೂ ಬ್ಯಾಂಕಿನ ಆಡಳಿತ ಮಂಡಳಿ, ನಿರ್ದೇಶಕ ಮಂಡಳಿಯವರು ಉಪಸ್ಥಿತರಿದ್ದರು.