ಮಲೇಬೆನ್ನೂರು, ಏ. 3 – ಹೊಳೆಸಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಿಪ್ ಯೋಜನೆಯಡಿಯಲ್ಲಿ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮತದಾರರಿಗೆ ಪ್ರತಿಜ್ಞಾ ವಿಧಿಯನ್ನು ತಾ. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ ಬೋಧಿಸಿದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಯವರು ಮತ್ತು ಆಶಾ ಕಾರ್ಯ ಕರ್ತೆಯರು, ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.
January 11, 2025