ದಾವಣಗೆರೆ, ಏ. 4- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನ್ಯಾಮತಿ ತಾಲ್ಲೂಕು ಜೀನಹಳ್ಳಿ ಚೆಕ್‌ಪೋಸ್ಟ್‌ಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಅವರು ಇಂದು ಭೇಟಿ ಮಾಡಿ ಪರಿಶೀಲಿಸಿದರು.
ಯಾವುದೇ ಚುನಾವಣೆ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ, ನ್ಯಾಮತಿ ಪೊಲೀಸ್ ಠಾಣೆಯ ರವಿ ಉಪಸ್ಥಿತರಿದ್ದರು.