ದಾವಣಗೆರೆ,ಏ.11- ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಎಲ್.ಡಿ.ಗೋಣೆಪ್ಪ ಅವರು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ಆಡಳಿತ ಮತ್ತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪನವರ ಅಭಿವೃದ್ಧಿ ಕಾರ್ಯ ಮೆಚ್ಚಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸುವುದಾಗಿ ಗೋಣೆಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ನಗರಪಾಲಿಕೆ ಸದಸ್ಯರಾದ ಎ.ಬಿ. ರಹೀಮ್, ಚಮನ್ ಸಾಬ್, ಮಾಜಿ ಸದಸ್ಯ ಎಸ್.ಬಸಪ್ಪ, ಗಣೇಶ್ ಹುಲ್ಮನಿ, ಟಿ.ಡಿ.ಹಾಲೇಶ್, ಗೌಡ್ರು ಚನ್ನಬಸಪ್ಪ, ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಲ್.ಎಂ.ಹೆಚ್. ಸಾಗರ್ ಮತ್ತಿತರರು ಹಾಜರಿದ್ದರು.