ಮಲೇಬೆನ್ನೂರು, ಏ. 15- ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ ಭಾನುವಾರ ಹರಿಹರ ತಾಲ್ಲೂಕಿನಲ್ಲಿ ಆರಂಭಗೊಂಡಿತು.
ಉಕ್ಕಡಗಾತ್ರಿಯಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯೊಂದಿಗೆ ಜಂಟಿ ಪ್ರಚಾರ ಆರಂಭಿಸಿದ ಬಿಜೆಪಿ-ಜೆಡಿಎಸ್ ನಾಯಕರು, ನಂತರ ನಂದಿಗುಡಿ, ವಾಸನ, ನಂದೀಶ್ವರ ಕ್ಯಾಂಪ್, ಕೆ.ಎನ್. ಹಳ್ಳಿ, ಕೊಕ್ಕನೂರು, ಹಿಂಡಸಘಟ್ಟ, ಗೋವಿನಹಾಳ್, ಮೂಗಿನಗೊಂದಿ, ಜಿ.ಟಿ. ಕಟ್ಟೆ, ಕಂಭತ್ತಹಳ್ಳಿ, ಹಳ್ಳಿಹಾಳ್, ಜಿ. ಬೇವಿನಹಳ್ಳಿ, ಕಮಲಾಪುರ, ಭಾನುವಳ್ಳಿ, ರಾಮತೀರ್ಥ, ನಾಗೇನಹಳ್ಳಿ ಗ್ರಾಮಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರು.
ಹಳ್ಳಿಗಳ ಭೇಟಿ ವೇಳೆ ಬಿಜೆಪಿ – ಜೆಡಿಎಸ್ ಮುಖಂಡರನ್ನು ಒಂದೆಡೆ ಸೇರಿಸಿ ಇದೇ
ದಿನಾಂಕ 19 ರಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ನಾಮಪತ್ರ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಗಳ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ತಿಳಿಸಿ, ಬಿಜೆಪಿ ಗೆಲುವಿಗೆ ಶ್ರಮಿಸುವಂತೆಯೂ ಮನವಿ ಮಾಡಿದರು.
ಜೆಡಿಎಸ್ ಮುಖಂಡ ಹಿಂಡಸಘಟ್ಟಿ ಮುರುಗೇಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ತಾ. ಬಿಜೆಪಿ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್, ಜೆಡಿಎಸ್ ಅಧ್ಯಕ್ಷ ಹಳ್ಳಿಹಾಳ್ ಪರಮೇಶ್ವರಪ್ಪ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಐರಣಿ ಅಣ್ಣಪ್ಪ, ತಾಲ್ಲೂಕು ಬಿಜೆಪಿ ಕಾರ್ಯದರ್ಶಿಗಳಾದ ಆದಾಪುರ ವೀರೇಶ್, ಹುಗ್ಗಿ ಮಾಲತೇಶ್ ಮತ್ತಿತರರು ಈ ವೇಳೆ ಹಾಜರಿದ್ದರು.