ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು

ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು

ಮಹಿಳೆಯರೊಂದಿಗೆ ಪ್ರಭಾ ಮಲ್ಲಿಕಾರ್ಜುನ್ ಸಂವಾದ

ದಾವಣಗೆರೆ, ಏ. 16 – ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ನಗರದ ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುವ ಉದ್ಯೋಗಸ್ಥ ಮಹಿಳೆಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ಮಹಿಳೆಯರ ಸಬಲೀಕರಣ ಅವಶ್ಯಕತೆ ಇರುವುದನ್ನು ಮನಗಂಡು ಕಾಂಗ್ರೆಸ್ ಸರ್ಕಾರ ಪ್ರತಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಿದ್ದು, ಶಕ್ತಿ ಯೋಜನೆ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅನುಕೂಲ ಕಲ್ಪಿಸಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳಾ ಸಂಘಗಳನ್ನು ಆರಂಭಿಸುವ ಮೂಲಕ ಉಳಿತಾಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಇನ್ನು ಹೆಚ್ಚಿನ ರೀತಿಯಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಗಾರ್ಮೆಂಟ್ಸ್ ಮತ್ತು ಕರಕುಶಲ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ನಡೆಸಲಾಗಿದೆ. ಜೊತೆಗೆ ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಭೂಮಿಕಾ ಡಿ.ಸಿ. ಶ್ರೀನಿವಾಸ್, ಸತ್ಯನಾರಾಯಣ, ಕೋಮಲ ಜೈನ್, ಹಾಲೇಶ್ ಗೌಡ, ಶಾಕೀರ ಗಾರ್ಮೆಂಟ್ಸ್‍ನ ಆರೀಫ್, ಎಸ್.ಬಿ.ಎಲ್ ಗಾರ್ಮೆಂಟ್ಸ್‍ನ ವಿಶ್ವನಾಥ, ಶ್ರೀನಿವಾಸ್, ಮಯೂರ ಗಾರ್ಮೆಂ ಟ್ಸ್‍ನ ಕಿಶನ್, ಮಹಾಂತ ಮೋಟಾರ್ಸ್‍ನ ಪ್ರಕಾಶ್, ಪ್ರಶಾಂತ್, ಸಾಯಿ ಕ್ರಿಯೇಷನ್‍ನ ಮುರುಗೇಶಪ್ಪ ಮತ್ತಿತರರಿದ್ದರು. 

error: Content is protected !!