ಹರಪನಹಳ್ಳಿ ತಾ.ನಲ್ಲಿ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ನರೇಗಾ ಕಮೀಷನರ್

ಹರಪನಹಳ್ಳಿ ತಾ.ನಲ್ಲಿ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ನರೇಗಾ ಕಮೀಷನರ್

ಹರಪನಹಳ್ಳಿ, ಏ.19- ತಾಲ್ಲೂಕಿನಲ್ಲಿ‌ ನರೇಗಾದಡಿ ಕೈಗೆತ್ತಿಕೊಂಡ ಕಾಮಗಾರಿ ಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಹೇಳಿದರು.

ತಾಲ್ಲೂಕಿನ ಬೆಣ್ಣಿಹಳ್ಳಿ ಹಾಗೂ ಮೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನರೇಗಾದಡಿ ಅಭಿವೃದ್ಧಿಪಡಿಸಿದ ಕಾಮಗಾರಿಗಳ ಸ್ಥಳಕ್ಕೆ ಶುಕ್ರವಾರ ಭೇಟಿ‌ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.

ಶಾಲಾ ಶೌಚಾಲಯ ಕಾಮಗಾರಿಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ. 

ಅಡುಗೆ ಕೋಣೆ, ಕಾಂಪೌಂಡ್ ಸೇರಿದಂತೆ ಇತರೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆ. ಆದರೆ, ಕಾಮಗಾರಿಗಳ ಕಡತಗಳನ್ನೂ ಸಹ ಅದೇ ರೀತಿ ಉತ್ತಮವಾಗಿ ನಿರ್ವಹಿಸಿರಬೇಕು ಎಂದು ‌ತಾಂತ್ರಿಕ ಸಹಾಯಕರಿಗೆ ಸೂಚನೆ ನೀಡಿದರು.

ಬೆಣ್ಣಿಹಳ್ಳಿ ತಾಲ್ಲೂಕಿನ ನಿಲುವಂಜಿ ಗ್ರಾಮದ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಟೆಕ್‌ ಶೌಚಾಲಯ ಹಾಗೂ ಕಾಂಪೌಂಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ‌ ನೀಡಿದ ಆಯುಕ್ತರು, ಇನ್ನೂ ಇದೇ ಶಾಲೆಯಲ್ಲಿ ಬೇರೆ ಬೇರೆ ಕಾಮಗಾರಿ ತೆಗೆದುಕೊಳ್ಳಿ, ಶಾಲಾ ಮೈದಾನ ಅಭಿವೃದ್ಧಿ, ಪೌಷ್ಟಿಕ ಕೈತೋಟ, ವಿವಿಧ ಕ್ರೀಡೆಯ ಅಂಕಣಗಳ ಅಭಿವೃದ್ಧಿಪಡಿಸಬಹುದು. ಆದರೆ, ಮೈದಾನದ ಅಭಿವೃದ್ಧಿ ವೇಳೆ ಗಿಡಗಳನ್ನು ಕಡಿಯದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು.

ಮೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈದೂರು ಗ್ರಾಮದ ಗುರುಲಿಂಗನಗೌಡ ಎಂಬುವವರು ಅಭಿವೃದ್ದಿಪಡಿಸಿಕೊಂಡ ದಾಳಿಂಬೆ ತೋಟ, ಕೆಂಚಮ್ಮ ಎಂಬುವವರು ಅಭಿವೃದ್ಧಿಪಡಿಸಿದ ಪಪ್ಪಾಯ ತೋಟವನ್ನು ವೀಕ್ಷಣೆ ಮಾಡಿದ ಆಯುಕ್ತರು, ನರೇಗಾದಡಿ ವೈಯಕ್ತಿಕ ಯೋಜನೆಯಡಿ‌ ತೋಟಗಾರಿಕೆ ಸೇರಿದಂತೆ ಇತರೆ ಕಾಮಗಾರಿಗಳಲ್ಲಿ ಫಲಾನುಭವಿಗಳೂ ಸಹ ನರೇಗಾದಡಿ‌ ಅಕುಶಲ ಕೂಲಿ ಕೆಲಸ ಮಾಡಬೇಕು. ಇದರಿಂದ ಮಾನವ ದಿನಗಳ ಹೆಚ್ಚೆಚ್ಚು ಸೃಜನೆಯಾಗುತ್ತವೆ. ಇದರ ಜೊತೆಗೆ ಮತ್ತಷ್ಟು ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನೆರವಾಗುತ್ತದೆ ಎಂದು ಸಲಹೆ ನೀಡಿದರು.

ಮೈದೂರು ಗ್ರಾ.ಪಂ ವ್ಯಾಪ್ತಿಯ ಬಳಿಗಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಕೋಣೆ ಹಾಗೂ ಭೋಜನಾಲಯ, ಕೆಸರಹಳ್ಳಿ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ನರೇಗಾದಡಿ ನಿರ್ಮಿಸಿದ ಶೌಚಾಲಯ, ಕಾಂಪೌಂಡ್ ವೀಕ್ಷಣೆ ಮಾಡಿ ಸ್ಥಳದಲ್ಲೇ ಕಾಮಗಾರಿ ಕಡತ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಸದಾಶಿವ ಪ್ರಭು, ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಜಂಟಿ ನಿರ್ದೇಶಕ (ತಾಂತ್ರಿಕ) ರಾದ ವೇಣುಗೋಪಾಲ್ ರಾವ್, ರಾಜ್ಯ ನರೇಗಾ ಸಹಾಯಕ ನಿರ್ದೇಶಕ ಸಂಜೀವಕುಮಾರ್, ಯೋಜನಾ ಅಭಿಯಂತರರಾದ ಅಭಿರಾಮ್, ಜಿಐಎಸ್ ಸಂಯೋಜಕ ಆದರ್ಶ್,  ಕಾರ್ಯನಿರ್ವಾಹಕ ಅಧಿಕಾರಿ ವೈ.ಹೆಚ್.ಚಂದ್ರಶೇಖರ್, ಸಹಾಯಕ ನಿರ್ದೇಶಕ (ಗ್ರಾ.ಉ.)   ಯು.ಹೆಚ್.ಸೋಮಶೇಖರ್, ಎಡಿಪಿಸಿ ಬಸವರಾಜ್, ತಾಂತ್ರಿಕ ಸಂಯೋಜಕ ನಾಗರಾಜ ನಾಯ್ಕ, ಐಇಸಿ ಸಂಯೋಜಕ ಕೆ.ವಸಿಗೇರಪ್ಪ ಚಾಗನೂರು, ತಾಂತ್ರಿಕ ಸಹಾಯಕರಾದ ಲೋಕೇಶ್ ನಾಯ್ಕ, ರವಿ ಹಲಗೇರಿ ಇಲಾಖೆ  ಅನುಷ್ಠಾನ ಅಧಿಕಾರಿಗಳು, ತಾ.ಪಂ, ಗ್ರಾ.ಪಂ ಸಿಬ್ಬಂದಿ ಇದ್ದರು.

error: Content is protected !!