ಸೊಕ್ಕೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಭೇಟಿ

ಸೊಕ್ಕೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಭೇಟಿ

ಜಗಳೂರು, ಏ. 19 –  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಸೊಕ್ಕೆ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಬಾಬಾರವರ  ಆಶೀರ್ವಾದ ಪಡೆದರು. 

ನಂತರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸ್ವಾತಿ ಅವರು ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರವರಿಗೆ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ   ಇಂದಿರಾ ರಾಮಚಂದ್ರ, ಜಯಮ್ಮ ಸೇರಿದಂತೆ ಗ್ರಾಮದ ಬಿಜೆಪಿ ಮುಖಂಡರು ಇದ್ದರು.

error: Content is protected !!