ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡಲು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು

ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡಲು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು

ಹರಪನಹಳ್ಳಿ, ಏ.22- ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ತಿಳಿಸಿದರು.

ಪಟ್ಟಣದ ಕೊಟ್ಟೂರು ರಸ್ತೆಯ ಚಿನ್ನಾರಿ ಆಸ್ಪತ್ರೆಯ ಕಟ್ಟಡದ ಬಳಿಯಿರುವ ನೂತನ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರವರ ಪರವಾಗಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಹರಪನಹಳ್ಳಿ ತಾಲ್ಲೂಕಿನಿಂದ ಹೆಚ್ಚು ಮತಗಳನ್ನು ಹಾಕಿಸಿ, ಹಾರಿಸಿ ತರಬೇಕೆಂದು ಕರೆ ನೀಡಿದರು.

ನರೇಂದ್ರ ಮೋದಿಯವರನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಜೊತೆ ಕೆಲ ವಿರೋಧ ಪಕ್ಷಗಳು ಸೇರಿಕೊಂಡಿವೆ. ತಮ್ಮ ಆಸ್ತಿ, ಸಂಪತ್ತನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

ವಿರೋಧ ಪಕ್ಷಗಳು ತಮ್ಮ ಸ್ವ-ಹಿತಕ್ಕಾಗಿ ನರೇಂದ್ರ ಮೋದಿಯವರ ಸೋಲನ್ನು ಬಯಸಿದರೆ ಬಿಜೆಪಿ ದೇಶದ ರಕ್ಷಣೆ, ಭದ್ರತೆ ಹಾಗೂ ಅಭಿವೃದ್ಧಿಗಾಗಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಯಸುತ್ತಿದೆ ಇದು ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್‍ಗಿರುವ ವ್ಯತ್ಯಾಸ ಎಂದು ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ದೇಶದ ಆರ್ಥಿಕ ಸ್ಥಿತಿ 5ನೇ ಸ್ಥಾನಕ್ಕೆ ಬಂದಿದೆ. ಇದು ಪ್ರಧಾನಿ ಮೋದಿಯವರಿಂದ ಸಾಧ್ಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಭಾರತದ ಆರ್ಥಿಕತೆ 3ನೇ ಸ್ಥಾನಕ್ಕೆ ಬರಲಿದೆ ಎಂದ ಅವರು 2047ಕ್ಕೆ ಭಾರತ ವಿಶ್ವದ ನಂಬರ್-1 ದೇಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಲಕ್ಷ್ಮಣ್, ಪುರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ಅಶೋಕ್, ಮುಖಂಡರಾದ ಜಿ.ನಂಜನಗೌಡ, ಆರುಂಡಿ ನಾಗರಾಜ್, ಬಾಗಳಿ ಕೊಟ್ರೇಶಪ್ಪ, ಎಂ.ಪಿ.ನಾಯ್ಕ್, ಕಣಿವಿಹಳ್ಳಿ ಮಂಜುನಾಥ್, ಮಂಜ್ಯಾನಾಯ್ಕ್, ಸತ್ತೂರು ಹಾಲೇಶ್, ಮುತ್ತಿಗಿ ವಾಗೀಶ್, ಮುದಕವನವರ್ ಶಂಕರ್, ಬಿ,ವೈ.ವೆಂಕಟೇಶ್, ಚನ್ನನಗೌಡ, ಓಂಕಾರಗೌಡ, ಉದಯ ಕುಮಾರ್, ಕಡತಿ ರಮೇಶ್, ಬೂದಿ ನವೀನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಪ್ನ ಮಲ್ಲಿಕಾರ್ಜುನ್, ಕುಸುಮ ಜಗದೀಶ್, ರೇಖಾ ಸೇರಿದಂತೆ ಇತರರು ಇದ್ದರು.

error: Content is protected !!